Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:6 - ಕನ್ನಡ ಸಮಕಾಲಿಕ ಅನುವಾದ

6 ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂದುದರಿಂದ ಅವನು ಬರಿಗೈಯಿಂದಲೇ ಹೋತದ ಮರಿಯನ್ನೋ ಎಂಬಂತೆ ಅದನ್ನು ಎರಡು ಹೋಳಾಗಿ ಸೀಳಿಬಿಟ್ಟನು. ಆದರೆ ಸಂಸೋನನು ಇದನ್ನು ತನ್ನ ತಂದೆತಾಯಿಗಳಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:6
21 ತಿಳಿವುಗಳ ಹೋಲಿಕೆ  

ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ, ಬೀದಿಗಳಲ್ಲಿ ತನ್ನ ಧ್ವನಿಯನ್ನು ಕೇಳಗೊಡಿಸುವುದಿಲ್ಲ.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


“ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ,” ಎಂದು ಹೇಳಿ ತನ್ನ ಶಕ್ತಿಯಿದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ, ಅದರಲ್ಲಿದ್ದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಸಂಸೋನನು ಬದುಕಿದ್ದಾಗ ಕೊಂದ ಜನರಿಗಿಂತಲೂ ಮರಣಹೊಂದುವಾಗ ಕೊಂದ ಜನರ ಸಂಖ್ಯೆಯೇ ಹೆಚ್ಚಾಗಿತ್ತು.


ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.


ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,


ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.


ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾಗಿದ್ದಳು.


ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.


ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.


ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.


ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.


ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು