Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:9 - ಕನ್ನಡ ಸಮಕಾಲಿಕ ಅನುವಾದ

9 ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:9
7 ತಿಳಿವುಗಳ ಹೋಲಿಕೆ  

ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.


ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ಮದುವೆ ಮಾಡಿಕೊಳ್ಳುವುದಕ್ಕೆ ತಿರುಗಿ ಬರುವಾಗ, ಸಿಂಹದ ಹೆಣವನ್ನು ನೋಡುವುದಕ್ಕೆ ಪಕ್ಕಕ್ಕೆ ಹೋದಾಗ, ಸಿಂಹದ ಹೆಣದಲ್ಲಿ ಜೇನುಹುಳಗಳನ್ನು ಮತ್ತು ಜೇನನ್ನು ಕಂಡನು.


ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.


ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.


ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.


ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು