ನ್ಯಾಯಸ್ಥಾಪಕರು 15:11 - ಕನ್ನಡ ಸಮಕಾಲಿಕ ಅನುವಾದ11 ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ?” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತಿಲ್ಲವೇ? ಹೀಗೆ ಏಕೆ ಮಾಡಿದೆ,” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ - ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬದು ನಿನಗೆ ಗೊತ್ತಿಲ್ಲವೋ? ಹೀಗೆ ಯಾಕೆ ಮಾಡಿದಿ ಎಂದು ಕೇಳಲು ಅವನು - ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಯೆಹೂದಕುಲದ ಮೂರು ಸಾವಿರ ಜನರು ಸಂಸೋನನಲ್ಲಿಗೆ ಹೋದರು. ಅವರು ಏಟಾಮಿನ ಬಂಡೆಯ ಬಳಿಯಲ್ಲಿದ್ದ ಗುಹೆಗೆ ಬಂದು ಅವನಿಗೆ, “ನೀನು ನಮಗೆ ಮಾಡಿರುವುದೇನು? ಫಿಲಿಷ್ಟಿಯರು ನಮ್ಮನ್ನು ಆಳುತ್ತಿದ್ದಾರೆ ಎಂಬುದು ನಿನಗೆ ಗೊತ್ತಿಲ್ಲವೇ?” ಎಂದು ಕೇಳಿದರು. ಸಂಸೋನನು, “ಅವರು ನನಗೆ ಮಾಡಿದ ದ್ರೋಹಕ್ಕಾಗಿ ನಾನು ಅವರನ್ನು ಶಿಕ್ಷಿಸಿದೆ” ಎಂದನು. ಅಧ್ಯಾಯವನ್ನು ನೋಡಿ |