Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:18 - ಕನ್ನಡ ಸಮಕಾಲಿಕ ಅನುವಾದ

18 ಅವನಿಗೆ ಬಹಳ ಬಾಯಾರಿಕೆಯಾದದರಿಂದ ಅವನು ಯೆಹೋವ ದೇವರಿಗೆ ಮೊರೆಯಿಟ್ಟನು, “ನಿಮ್ಮ ಸೇವಕನಿಗೆ ನೀವು ಈ ಮಹಾ ರಕ್ಷಣೆಯನ್ನು ಕೊಟ್ಟಿದ್ದೀರಿ. ಈಗ ಬಾಯಾರಿಕೆಯಿಂದ ಬಳಲಿ, ಸುನ್ನತಿಯಾಗದ ಈ ಜನರ ಕೈಯಲ್ಲಿ ನಾನು ಬೀಳಬೇಕೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಬಹಳ ಬಾಯಾರಿದವನಾಗಿ ಯೆಹೋವನಿಗೆ, “ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟುಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ” ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಂಸೋನನಿಗೆ ತುಂಬ ನೀರಡಿಕೆಯಾಗಿತ್ತು. ಅವನು ಯೆಹೋವನಿಗೆ, “ನಾನು ನಿನ್ನ ಸೇವಕನಾಗಿದ್ದೇನೆ. ನೀನು ನನಗೆ ಈ ಮಹಾವಿಜಯವನ್ನು ಕೊಟ್ಟಿರುವೆ. ದಯವಿಟ್ಟು ಈಗ ನಾನು ನೀರಡಿಕೆಯಿಂದ ಸಾಯಲು ಬಿಡಬೇಡ. ಸುನ್ನತಿ ಮಾಡಿಸಿಕೊಂಡಿಲ್ಲದವರು ನನ್ನನ್ನು ಹಿಡಿದುಕೊಡುವಂತೆ ಮಾಡಬೇಡ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:18
19 ತಿಳಿವುಗಳ ಹೋಲಿಕೆ  

ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.


“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”


ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.


ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು.


ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು