ನ್ಯಾಯಸ್ಥಾಪಕರು 15:2 - ಕನ್ನಡ ಸಮಕಾಲಿಕ ಅನುವಾದ2 ಆದರೆ ಅವಳ ತಂದೆಯು ಅವನನ್ನು ಅನುಮತಿಸದೆ ಅವನಿಗೆ, “ನೀನು ಅವಳನ್ನು ಪೂರ್ಣವಾಗಿ ಹಗೆ ಮಾಡಿದೆ ಎಂದು ನಾನು ನಿಜವಾಗಿ ತಿಳಿದು, ಅವಳನ್ನು ನಿನ್ನ ಜೊತೆಯವನಿಗೆ ಮದುವೆ ಮಾಡಿಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರಿಯಾಗಿದ್ದಾಳೆ. ಅವಳಿಗೆ ಬದಲಾಗಿ ಇವಳನ್ನು ಮದುವೆಯಾಗು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ನಿಜವಾಗಿ ಆಕೆಯನ್ನು ಹಗೆಮಾಡುತ್ತೀಯೆಂದು ತಿಳಿದು ಅವಳನ್ನು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೀನು ನಿಜವಾಗಿ ಆಕೆಯನ್ನು ದ್ವೇಷಮಾಡುತ್ತೀಯೆಂದು ನಿನ್ನ ಆಪ್ತರೊಬ್ಬನಿಗೆ ಮದುವೆಮಾಡಿಕೊಟ್ಟೆ. ಆಕೆಯ ತಂಗಿ ಆಕೆಗಿಂತ ಸುಂದರಿಯಾಗಿದ್ದಾಳೆ; ಈಕೆ ನಿನಗೆ ಇರಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ನಿಜವಾಗಿ ಆಕೆಯನ್ನು ಹಗೆ ಮಾಡುತ್ತೀಯೆಂದು ನಿನ್ನ ಗೆಳೆಯರಲ್ಲೊಬ್ಬನಿಗೆ ಮದುವೆಮಾಡಿ ಕೊಟ್ಟೆನು. ಆಕೆಯ ತಂಗಿಯು ಆಕೆಗಿಂತ ಸುಂದರಿಯಾಗಿದ್ದಾಳಲ್ಲಾ; ಈಕೆಯು ನಿನಗಿರಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಸಂಸೋನನಿಗೆ, “ನೀನು ಅವಳನ್ನು ದ್ವೇಷಿಸುವೆ ಎಂದು ತಿಳಿದು ಮದುವೆಯಲ್ಲಿ ನಿನ್ನೊಂದಿಗಿದ್ದ ಉತ್ತಮ ಪುರುಷನೊಬ್ಬನಿಗೆ ಅವಳನ್ನು ಮದುವೆ ಮಾಡಿಕೊಟ್ಟೆ. ಅವಳ ತಂಗಿಯು ಆಕೆಗಿಂತ ಹೆಚ್ಚು ಸುಂದರಿಯಾಗಿದ್ದಾಳೆ. ಆಕೆಯನ್ನು ನೀನು ಮದುವೆಯಾಗು” ಎಂದನು. ಅಧ್ಯಾಯವನ್ನು ನೋಡಿ |