ನ್ಯಾಯಸ್ಥಾಪಕರು 15:5 - ಕನ್ನಡ ಸಮಕಾಲಿಕ ಅನುವಾದ5 ಬಾಲಗಳಿಗೆ ಬೆಂಕಿ ಹಚ್ಚಿ, ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು, ತೆನೆ ಗೂಡುಗಳನ್ನೂ, ಪೈರುಗಳನ್ನೂ, ದ್ರಾಕ್ಷಿತೋಟಗಳನ್ನೂ, ಹಿಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ನರಿಗಳನ್ನು ಫಿಲಿಷ್ಟಿಯರ ಹೊಲಗಳಲ್ಲಿ ಬಿಟ್ಟು, ಅವರ ತೆನೆಗೂಡುಗಳನ್ನೂ, ಇನ್ನೂ ಕೊಯ್ಯದೆ ಇದ್ದ ಬೆಳೆಯನ್ನೂ, ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ನರಿಗಳನ್ನು ‘ಫಿಲಿಷ್ಟಿಯರ ಬೆಳೆ ತುಂಬಿದ ಹೊಲಗಳಿಗೆ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಸುಟ್ಟುಬಿಟ್ಟನು. ಎಣ್ಣೆಯ ಮರಗಳ ತೋಟಗಳು ಸಹ ಸುಟ್ಟುಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪಂಜುಗಳಿಗೆ ಬೆಂಕಿಹೊತ್ತಿಸಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಲ್ಲಿ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಎಣ್ಣೆಯ ಮರಗಳ ತೋಟಗಳನ್ನೂ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂಸೋನನು ಆ ಪಂಜುಗಳಿಗೆ ಬೆಂಕಿ ಹಚ್ಚಿ ಆ ನರಿಗಳನ್ನು ಫಿಲಿಷ್ಟಿಯರ ಪೈರುಗಳಿದ್ದ ಹೊಲಗಳಲ್ಲಿ ಓಡಾಡಲು ಬಿಟ್ಟನು. ಈ ರೀತಿ ಅವನು ಅವರ ಹೊಲಗಳಲ್ಲಿ ಬೆಳೆದ ಪೈರನ್ನೂ ಮತ್ತು ಅವರು ಕೊಯ್ದುಹಾಕಿದ ತೆನೆಗೂಡುಗಳನ್ನೂ ಸುಟ್ಟುಹಾಕಿದನು. ಅವನು ಅವರ ದ್ರಾಕ್ಷಿಯ ತೋಟಗಳನ್ನು ಮತ್ತು ಆಲಿವ್ ಮರಗಳನ್ನು ಸುಟ್ಟುಹಾಕಿದನು. ಅಧ್ಯಾಯವನ್ನು ನೋಡಿ |