ನ್ಯಾಯಸ್ಥಾಪಕರು 15:6 - ಕನ್ನಡ ಸಮಕಾಲಿಕ ಅನುವಾದ6 ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಫಿಲಿಷ್ಟಿಯರು ಇದನ್ನು ಮಾಡಿದವರು ಯಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಆಕೆಯನ್ನೂ, ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವನು ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಇದನ್ನು ಮಾಡಿದವರು ಯಾರು?” ಎಂದು ಫಿಲಿಷ್ಟಿಯರು ವಿಚಾರಿಸಿದರು. ಒಬ್ಬನು, “ತಿಮ್ನಾ ನಗರದವನ ಅಳಿಯನಾದ ಸಂಸೋನನು ಇದನ್ನು ಮಾಡಿದನು. ಸಂಸೋನನ ಮಾವನು ಸಂಸೋನನ ಹೆಂಡತಿಯನ್ನು ಮದುವೆಯಲ್ಲಿದ್ದ ಉತ್ತಮ ಪುರುಷನೊಬ್ಬನಿಗೆ ಮದುವೆಮಾಡಿಕೊಟ್ಟಿದ್ದಕ್ಕಾಗಿ ಅವನು ಹೀಗೆಲ್ಲಾ ಮಾಡಿದನು” ಎಂದು ಹೇಳಿದನು. ಆಗ ಫಿಲಿಷ್ಟಿಯರು ಸಂಸೋನನ ಹೆಂಡತಿಯನ್ನು ಮತ್ತು ಅವಳ ತಂದೆಯನ್ನು ಸುಟ್ಟುಹಾಕಿದರು. ಅಧ್ಯಾಯವನ್ನು ನೋಡಿ |