Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:10 - ಕನ್ನಡ ಸಮಕಾಲಿಕ ಅನುವಾದ

10 ಆಗ ದೆಲೀಲಳು ಸಂಸೋನನಿಗೆ, “ನೀನು ನನ್ನನ್ನು ವಂಚನೆಮಾಡಿ, ನನಗೆ ಸುಳ್ಳು ಹೇಳಿದೆ. ಈಗ ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ನನಗೆ ದಯಮಾಡಿ ತಿಳಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೆಲೀಲಳು ತಿರಿಗಿ ಸಂಸೋನನಿಗೆ - ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂಬದನ್ನು ದಯವಿಟ್ಟು ನನಗೆ ತಿಳಿಸು ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಸುಳ್ಳು ಹೇಳಿದೆ, ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವದು ಹೇಗೆಂಬುದನ್ನು ದಯವಿಟ್ಟು ಹೇಳು” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:10
10 ತಿಳಿವುಗಳ ಹೋಲಿಕೆ  

ದೆಲೀಲಳು ಸಂಸೋನನಿಗೆ, “ಈವರೆಗೂ ನನ್ನನ್ನು ವಂಚನೆಮಾಡಿ, ನನಗೆ ಸುಳ್ಳುಗಳನ್ನು ಹೇಳಿದೆ. ನಿನ್ನನ್ನು ಯಾವುದರಿಂದ ಕಟ್ಟಬಹುದೋ ತಿಳಿಸು,” ಎಂದಳು. ಅವನು ಅವಳಿಗೆ, “ನೀನು ನನ್ನ ತಲೆಯ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಆಗುವುದು,” ಎಂದನು.


ಆಗ ಯೇಸು ಅವನಿಗೆ, “ಯೂದಾ, ಮುದ್ದಿನಿಂದ ಮನುಷ್ಯಪುತ್ರನಾದ ನನಗೆ ದ್ರೋಹಮಾಡುತ್ತೀಯೋ?” ಎಂದರು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.


ಹೊಂಚುಗಾರರು ಅವಳಿಗೋಸ್ಕರ ಕೊಠಡಿಯಲ್ಲಿದ್ದರು. ಅವಳು ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ,” ಎಂದಳು. ಆಗ ಅವನು ಬೆಂಕಿ ತಗುಲಿದ ಸೆಣಬಿನ ದಾರ ಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆ ಹೋಯಿತು.


ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.


ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು