Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:12 - ಕನ್ನಡ ಸಮಕಾಲಿಕ ಅನುವಾದ

12 ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೆಲೀಲಳು ಕೆಲವು ಹೊಸ ಹಗ್ಗಗಳನ್ನು ತೆಗೆದುಕೊಂಡು ಸಂಸೋನನನ್ನು ಬಿಗಿದುಕಟ್ಟಿದಳು. ಕೆಲವು ಜನರು ಪಕ್ಕದ ಕೋಣೆಯಲ್ಲಿ ಅಡಗಿಕೊಂಡಿದ್ದರು. ದೆಲೀಲಳು, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಕೂಗಿದಳು. ಆದರೆ ಅವನು ದಾರಗಳನ್ನು ಕಿತ್ತುಹಾಕುವಂತೆ ಆ ಹಗ್ಗಗಳನ್ನು ಸುಲಭವಾಗಿ ಕಿತ್ತುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:12
4 ತಿಳಿವುಗಳ ಹೋಲಿಕೆ  

ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.


ದೆಲೀಲಳು ಸಂಸೋನನಿಗೆ, “ಈವರೆಗೂ ನನ್ನನ್ನು ವಂಚನೆಮಾಡಿ, ನನಗೆ ಸುಳ್ಳುಗಳನ್ನು ಹೇಳಿದೆ. ನಿನ್ನನ್ನು ಯಾವುದರಿಂದ ಕಟ್ಟಬಹುದೋ ತಿಳಿಸು,” ಎಂದಳು. ಅವನು ಅವಳಿಗೆ, “ನೀನು ನನ್ನ ತಲೆಯ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಆಗುವುದು,” ಎಂದನು.


ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.


ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು