ನ್ಯಾಯಸ್ಥಾಪಕರು 16:17 - ಕನ್ನಡ ಸಮಕಾಲಿಕ ಅನುವಾದ17 ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಅವನು - ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡುವದಾದರೆ ನನ್ನ ಶಕ್ತಿಯು ಹೋಗುವದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಕೊನೆಗೆ ಸಂಸೋನನು ದೆಲೀಲಳಿಗೆ ಎಲ್ಲವನ್ನು ಹೇಳಿದನು. “ನಾನೆಂದೂ ನನ್ನ ತಲೆಕೂದಲನ್ನು ಕತ್ತರಿಸಿಕೊಂಡಿಲ್ಲ. ನಾನು ಹುಟ್ಟುವ ಮೊದಲೇ ನನ್ನನ್ನು ದೇವರಿಗೆ ಪ್ರತಿಷ್ಠಿಸಲಾಗಿತ್ತ್ತು. ಯಾರಾದರೂ ನನ್ನ ತಲೆಬೋಳಿಸಿದರೆ ನಾನು ನನ್ನ ಶಕ್ತಿಯನ್ನು ಕಳೆದುಕೊಳ್ಳುತ್ತೇನೆ. ನಾನು ಬೇರೆ ಮನುಷ್ಯರಷ್ಟೇ ದುರ್ಬಲನಾಗುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |