Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:19 - ಕನ್ನಡ ಸಮಕಾಲಿಕ ಅನುವಾದ

19 ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆ ಹೋಗುವಂತೆ ಮಾಡಿ, ಒಬ್ಬನನ್ನು ಕರೆದು, ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ, ಅವನನ್ನು ದುರ್ಬಲಪಡಿಸಿದಳು. ಆಗ ಅವನ ಶಕ್ತಿ ಅವನನ್ನು ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಕೆ ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಹೋಯಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸಂಸೋನನು ಅವಳ ತೊಡೆಯ ಮೇಲೆ ಮಲಗಿ ನಿದ್ರೆಮಾಡಿದನು. ಆಗ ಅವಳು ಸಂಸೋನನ ಏಳುಜಡೆಗಳನ್ನು ಬೋಳಿಸಲು ಒಬ್ಬ ಮನುಷ್ಯನನ್ನು ಒಳಗೆ ಕರೆದಳು. ಅವನು ಆ ಏಳು ಜಡೆಗಳನ್ನು ಬೋಳಿಸಲು, ಅವನು ಇತರರಂತೆ ದುರ್ಬಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:19
6 ತಿಳಿವುಗಳ ಹೋಲಿಕೆ  

ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು