ನ್ಯಾಯಸ್ಥಾಪಕರು 16:23 - ಕನ್ನಡ ಸಮಕಾಲಿಕ ಅನುವಾದ23 ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಕೂಡಿಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು. ಅಧ್ಯಾಯವನ್ನು ನೋಡಿ |