Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:24 - ಕನ್ನಡ ಸಮಕಾಲಿಕ ಅನುವಾದ

24 ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಜನರು ಸಂಸೋನನನ್ನು ನೋಡಿ : ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಜನರು ಸಂಸೋನನನ್ನು ನೋಡಿ - ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದು ಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಗಾನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಫಿಲಿಷ್ಟಿಯರು ಸಂಸೋನನನ್ನು ನೋಡಿದ ಕೂಡಲೇ ತಮ್ಮ ದೇವರನ್ನು ಸ್ತುತಿಸಿದರು. ಅವರು, “ಇವನು ನಮ್ಮ ಜನರನ್ನು ಹಾಳುಮಾಡಿದನು. ಇವನು ನಮ್ಮ ಅನೇಕ ಜನರನ್ನು ಕೊಂದನು. ಆದರೆ ನಮ್ಮ ದೇವರು ನಮ್ಮ ಶತ್ರುವನ್ನು ಸೆರೆಹಿಡಿಯಲು ಸಹಾಯ ಮಾಡಿದನು” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:24
14 ತಿಳಿವುಗಳ ಹೋಲಿಕೆ  

ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.


ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.


ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.”


ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”


ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು