ನ್ಯಾಯಸ್ಥಾಪಕರು 16:25 - ಕನ್ನಡ ಸಮಕಾಲಿಕ ಅನುವಾದ25 ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಆನಂದಲಹರಿಯಲ್ಲಿದ್ದಾಗ - ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು; ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದಮಾಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಉತ್ಸವದಲ್ಲಿ ಜನರು ಸಂತೋಷವಾಗಿದ್ದರು. ಅವರು, “ಸಂಸೋನನನ್ನು ಕರೆದು ತನ್ನಿ. ನಾವು ಅವನ ತಮಾಷೆಯನ್ನು ನೋಡಬೇಕು” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ತಂದು ಅವನನ್ನು ಅಪಹಾಸ್ಯ ಮಾಡಿದರು. ಸಂಸೋನನನ್ನು ಅವರ ದೇವರಾದ ದಾಗೋನನ ಮಂದಿರದಲ್ಲಿ ಎರಡು ಕಂಬಗಳ ಮಧ್ಯದಲ್ಲಿ ನಿಲ್ಲಿಸಿದರು. ಅಧ್ಯಾಯವನ್ನು ನೋಡಿ |
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.