Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:27 - ಕನ್ನಡ ಸಮಕಾಲಿಕ ಅನುವಾದ

27 ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿಯುತ್ತಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಮಂದಿರದಲ್ಲಿ ಗಂಡಸರು ಹೆಂಗಸರು ಕಿಕ್ಕಿರಿದು ನೆರೆದಿದ್ದರು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಮಾಳಿಗೆಯ ಮೇಲೆ ಸುಮಾರು ಮೂರು ಸಾವಿರ ಹೆಂಗಸರು ಮತ್ತು ಗಂಡಸರು ಇದ್ದರು. ಅವರು ನಕ್ಕು ಸಂಸೋನನನ್ನು ಅಪಹಾಸ್ಯ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:27
6 ತಿಳಿವುಗಳ ಹೋಲಿಕೆ  

ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು,


ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.


ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ, “ಈ ಕಟ್ಟಡದ ಆಧಾರ ಸ್ತಂಭಗಳನ್ನು ನಾನು ಸ್ಪರ್ಶಿಸಿ, ಅವುಗಳ ಮೇಲೆ ಆತುಕೊಳ್ಳುವ ಹಾಗೆ ನನ್ನನ್ನು ಬಿಡು,” ಎಂದನು.


ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು