Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:5 - ಕನ್ನಡ ಸಮಕಾಲಿಕ ಅನುವಾದ

5 ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ - ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವದೆಂಬದನ್ನೂ ನಾವು ಅವನನ್ನು ಗೆದ್ದು ಕಟ್ಟಿ ಕುಂದಿಸುವದು ಹೇಗೆಂಬದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯ ಪ್ರಭುಗಳು ದೆಲೀಲಳ ಬಳಿಗೆ ಹೋಗಿ, “ಸಂಸೋನನು ಅಷ್ಟೊಂದು ಶಕ್ತಿಶಾಲಿಯಾಗಿರುವುದಕ್ಕೆ ಕಾರಣಗಳನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಅವನನ್ನು ಮರುಳುಗೊಳಿಸಿ ಅವನ ರಹಸ್ಯವನ್ನು ತಿಳಿದುಕೊಳ್ಳಲು ಪ್ರಯತ್ನ ಮಾಡು. ಆಗ ನಾವು ಅವನನ್ನು ಸೋಲಿಸಿ, ಬಂಧಿಸಿ ನಮ್ಮ ಅಧೀನದಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ನೀನು ಇದನ್ನು ಮಾಡಿದರೆ ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಇಪ್ಪತ್ತೆಂಟು ಬೆಳ್ಳಿನಾಣ್ಯಗಳನ್ನು ಕೊಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:5
17 ತಿಳಿವುಗಳ ಹೋಲಿಕೆ  

ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.


ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;


“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.


ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.


ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.


ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.


ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು