Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:1 - ಕನ್ನಡ ಸಮಕಾಲಿಕ ಅನುವಾದ

1 ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಫ್ರಯಿಮ್ ಬೆಟ್ಟದ ಪ್ರಾಂತ್ಯದಲ್ಲಿ ಮೀಕ ಎಂಬ ಒಬ್ಬ ಮನುಷ್ಯನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬೊಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:1
11 ತಿಳಿವುಗಳ ಹೋಲಿಕೆ  

ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.


ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.


ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.


ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತೆಗೆದುಕೊಂಡು ಬಂದು, ಚೊರ್ಗಕ್ಕೂ, ಎಷ್ಟಾವೋಲಿಗೂ ನಡುವೆ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರ್ಷ ನ್ಯಾಯತೀರಿಸಿದನು.


ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.


ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, ಶೆಕೆಮನ್ನೂ ಗೆಜೆರನ್ನೂ


ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.


ಅವರ ಹೆಸರುಗಳು, ಅವರ ಜಿಲ್ಲೆಗಳು: ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು