Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:2 - ಕನ್ನಡ ಸಮಕಾಲಿಕ ಅನುವಾದ

2 ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮೀಕನು ತನ್ನ ತಾಯಿಗೆ, “ಅಮ್ಮಾ, ಯಾರೋ ನಿನ್ನ ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ಕದ್ದಿದ್ದರಲ್ಲಾ, ನಿನಗೆ ನೆನಪಿದೆಯಾ? ನೀನು ಅದರ ಸಲುವಾಗಿ ಶಾಪಹಾಕುವದನ್ನು ನಾನು ಕೇಳಿದ್ದೆ. ನಾನು ಅದನ್ನು ತೆಗೆದುಕೊಂಡಿದ್ದೆ. ಇಗೋ ಆ ಬೆಳ್ಳಿ ನನ್ನ ಹತ್ತಿರ ಇದೆ” ಎಂದು ಹೇಳಿದನು. ಅವನ ತಾಯಿಯು ಅವನಿಗೆ, “ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:2
21 ತಿಳಿವುಗಳ ಹೋಲಿಕೆ  

ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.


ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.


ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.


ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’


ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.


ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.


ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು