Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 17:5 - ಕನ್ನಡ ಸಮಕಾಲಿಕ ಅನುವಾದ

5 ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ, ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು, ತನ್ನ ಮಕ್ಕಳಲ್ಲಿ ಒಬ್ಬನನ್ನು ಅರ್ಚಕ ಸೇವೆಗಾಗಿ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವಿಗ್ರಹಗಳನ್ನು ಪೂಜಿಸುವುದಕ್ಕಾಗಿ ಮೀಕನಿಗೆ ಒಂದು ಮಂದಿರವಿತ್ತು. ಮೀಕನು ಏಫೋದನ್ನೂ ವಿಗ್ರಹಗಳನ್ನೂ ಪೂಜಿಸಲು ತನ್ನ ಒಬ್ಬ ಮಗನನ್ನು ಅರ್ಚಕನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 17:5
24 ತಿಳಿವುಗಳ ಹೋಲಿಕೆ  

ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”


ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.


ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.


ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು.


ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.


ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.


ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.


ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು.


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು