ನ್ಯಾಯಸ್ಥಾಪಕರು 18:1 - ಕನ್ನಡ ಸಮಕಾಲಿಕ ಅನುವಾದ1 ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವುದಕ್ಕೆ ತಮಗೆ ಬಾಧ್ಯತೆಯನ್ನು ಹುಡುಕುತ್ತಿದ್ದರು. ಏಕೆಂದರೆ ಅಂದಿನವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರೆತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆವರೆಗೂ ಇಸ್ರಯೇಲರಲ್ಲಿ ಆಸ್ತಿಪಾಸ್ತಿ ಸಿಕ್ಕದೆ ಇದ್ದುದರಿಂದ ಅವರು ತಮಗಾಗಿ ವಾಸಸ್ಥಳವನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ದಾನ್‍ಕುಲದವರಿಗೆ ಆವರೆಗೂ ಇಸ್ರಾಯೇಲ್ಯರಲ್ಲಿ ಸ್ವಾಸ್ತ್ಯವು ಸಿಕ್ಕದ್ದರಿಂದ ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಆ ಸಮಯದಲ್ಲಿ ದಾನ್ ಕುಲದವರು ಇನ್ನೂ ತಮ್ಮ ವಾಸಕ್ಕಾಗಿ ಒಂದು ಸ್ಥಳವನ್ನು ಹುಡುಕುತ್ತಿದ್ದರು. ಇನ್ನೂ ಅವರಿಗೆ ತಮ್ಮದೇ ಆದ ಒಂದು ಪ್ರದೇಶವೂ ಇರಲಿಲ್ಲ. ಇಸ್ರೇಲಿನ ಬೇರೆ ಕುಲಗಳಿಗೆ ತಮ್ಮದೇ ಆದ ಪ್ರದೇಶ ಇತ್ತು. ಆದರೆ ದಾನ್ ಕುಲದವರು ಮಾತ್ರ ಇನ್ನೂ ತಮ್ಮ ಪ್ರದೇಶವನ್ನು ಹೊಂದಿಕೊಂಡಿರಲಿಲ್ಲ. ಅಧ್ಯಾಯವನ್ನು ನೋಡಿ |