Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:10 - ಕನ್ನಡ ಸಮಕಾಲಿಕ ಅನುವಾದ

10 ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶ ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:10
14 ತಿಳಿವುಗಳ ಹೋಲಿಕೆ  

ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.


ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,


ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು