Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡಲು ಹೋಗಿದ್ದ ಐದು ಜನರು ತಮ್ಮ ಬಂಧುಗಳಿಗೆ, “ಇಲ್ಲಿಯ ಒಂದು ಮನೆಯಲ್ಲಿ ಏಫೋದ್ ಇದೆ; ಮನೆದೇವರುಗಳೂ ಇವೆ. ಕೆತ್ತಿ ಮಾಡಿರುವ ಒಂದು ವಿಗ್ರಹವೂ ಇದೆ. ಈಗ ನೀವು ಹೋಗಿ ಅವುಗಳನ್ನು ತೆಗೆದುಕೊಂಡು ಬನ್ನಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:14
11 ತಿಳಿವುಗಳ ಹೋಲಿಕೆ  

ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.


ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.


ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.


ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.


ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.


ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು