Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:18 - ಕನ್ನಡ ಸಮಕಾಲಿಕ ಅನುವಾದ

18 ಅವರು ಮೀಕನ ಮನೆಗೆ ಬಂದು, ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡಾಗ, ಯಾಜಕನು ಅವರಿಗೆ, “ನೀವು ಏನು ಮಾಡುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವುಗಳನ್ನು ಅವರು ಮೀಕನ ಮನೆಯನ್ನು ಹೊಕ್ಕು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ, “ನೀವು ಮಾಡಿದ್ದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ - ನೀವು ಮಾಡಿದ್ದೇನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:18
5 ತಿಳಿವುಗಳ ಹೋಲಿಕೆ  

“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.


ಅವರು ಅವನಿಗೆ, “ನೀನು ಸುಮ್ಮನೆ ಇರು; ನಿನ್ನ ಬಾಯಿ ಮುಚ್ಚಿಕೊಂಡು ನಮ್ಮ ಸಂಗಡ ಬಂದು, ನಮಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ, ಒಂದು ಕುಟುಂಬಕ್ಕೂ ಯಾಜಕನಾಗಿರುವುದು ಒಳ್ಳೆಯದೋ?” ಎಂದರು.


ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು.


ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು