ನ್ಯಾಯಸ್ಥಾಪಕರು 18:24 - ಕನ್ನಡ ಸಮಕಾಲಿಕ ಅನುವಾದ24 ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |