Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:29 - ಕನ್ನಡ ಸಮಕಾಲಿಕ ಅನುವಾದ

29 ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದವನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದಾನ್ಯರು ಆ ನಗರಕ್ಕೆ ಒಂದು ಹೊಸ ಹೆಸರನ್ನು ಕೊಟ್ಟರು. ಹಿಂದೆ ಅದರ ಹೆಸರು ಲಯಿಷ್ ಎಂದಿತ್ತು. ಆದರೆ ಅವರು ಅದಕ್ಕೆ ದಾನ್ ಎಂದು ಹೆಸರಿಟ್ಟರು. ಅವರು ತಮ್ಮ ಪೂರ್ವಿಕನಾದ ದಾನನ ಸ್ಮರಣಾರ್ಥವಾಗಿ ಆ ಹೆಸರನ್ನಿಟ್ಟರು. ದಾನನು ಇಸ್ರೇಲನ ಮಕ್ಕಳಲ್ಲಿ ಒಬ್ಬನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:29
11 ತಿಳಿವುಗಳ ಹೋಲಿಕೆ  

ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.


ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.


ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.


“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.


ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.


ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.


ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು