Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:4 - ಕನ್ನಡ ಸಮಕಾಲಿಕ ಅನುವಾದ

4 ಅವನು ಅವರಿಗೆ, “ಮೀಕನು ನನಗೆ ಹೀಗೆ ನಡೆಸುತ್ತಾ, ನನ್ನನ್ನು ಸಂಬಳಕ್ಕೆ ಇಟ್ಟುಕೊಂಡಿದ್ದಾನೆ. ನಾನು ಅವನಿಗೆ ಯಾಜಕನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೀಕನು ತನಗಾಗಿ ಮಾಡಿದ ಎಲ್ಲಾ ವ್ಯವಸ್ಥೆಯನ್ನು ಅವರಿಗೆ ವಿವರಿಸಿ, “ನಾನು ಮೀಕನ ಯಾಜಕನಾಗಿ ಕೆಲಸ ಮಾಡುತ್ತಿದ್ದೇನೆ. ಅವನು ನನಗೆ ಸಂಬಳ ಕೊಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:4
16 ತಿಳಿವುಗಳ ಹೋಲಿಕೆ  

ಮೀಕನು ಅವನಿಗೆ, “ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ, ಒಂದು ದುಸ್ತು ವಸ್ತ್ರಗಳನ್ನೂ, ಆಹಾರವನ್ನೂ ಕೊಡುವೆನು,” ಎಂದನು. ಹಾಗೆಯೇ ಲೇವಿಯನು ಹೋದನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.


ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು.


ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು.


ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು