Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:1
29 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವುದಕ್ಕೆ ತಮಗೆ ಬಾಧ್ಯತೆಯನ್ನು ಹುಡುಕುತ್ತಿದ್ದರು. ಏಕೆಂದರೆ ಅಂದಿನವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರೆತಿರಲಿಲ್ಲ.


ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.


ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.


ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.


ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.


ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.


ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.


ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.


ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.


ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.


ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು.


ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.


ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.


ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.


ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.


ಅವನ ಉಪಪತ್ನಿ ರೂಮಳೆಂಬವಳು ಸಹ ಟೆಬಹ, ಗಹಮ, ತಹಷ, ಮಾಕಾ ಎಂಬುವರನ್ನು ಹೆತ್ತಳು.


ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.


ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು.


ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.


ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.


ಅವರ ಹೆಸರುಗಳು, ಅವರ ಜಿಲ್ಲೆಗಳು: ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು