Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:10
7 ತಿಳಿವುಗಳ ಹೋಲಿಕೆ  

ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.


ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.


ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.


ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು