Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:2 - ಕನ್ನಡ ಸಮಕಾಲಿಕ ಅನುವಾದ

2 ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ಇವನನ್ನು ಬಿಟ್ಟು ಜಾರತ್ವಮಾಡಿ, ಯೆಹೂದದ ಬೇತ್ಲೆಹೇಮಿನಲ್ಲಿದ್ದ ತನ್ನ ತವರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಒಮ್ಮೆ ಅವಳಿಗೂ ಆ ಲೇವಿಗೂ ಜಗಳವಾಯಿತು. ಅವಳು ಅವನನ್ನು ಬಿಟ್ಟು ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತಂದೆಯ ಮನೆಗೆ ಹೋದಳು. ಅವಳು ಅಲ್ಲಿ ನಾಲ್ಕು ತಿಂಗಳು ಇದ್ದುಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:2
6 ತಿಳಿವುಗಳ ಹೋಲಿಕೆ  

ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.


ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


“ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.


ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.


ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.


ಆಗ ಅವಳ ಗಂಡನು ಎದ್ದು, ಅವಳ ಸಂಗಡ ಪ್ರೀತಿಯಿಂದ ಮಾತನಾಡಿ, ಅವಳನ್ನು ತಿರುಗಿ ಕರೆತರುವುದಕ್ಕೆ ತನ್ನ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರೆದುಕೊಂಡು ಹೋದಳು. ಆಕೆಯ ತಂದೆ ಅವನನ್ನು ಕಂಡಾಗ, ಸಂತೋಷದಿಂದ ಅವನನ್ನು ಸ್ವಾಗತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು