ನ್ಯಾಯಸ್ಥಾಪಕರು 19:22 - ಕನ್ನಡ ಸಮಕಾಲಿಕ ಅನುವಾದ22 ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಲೇವಿಯು ಮತ್ತು ಅವನ ಸಂಗಡಿಗರು ಸಂತೋಷದಿಂದ ಅಲ್ಲಿದ್ದಾಗ ಆ ನಗರದ ಕೆಲವು ಜನರು ಆ ಮನೆಗೆ ಮುತ್ತಿಗೆ ಹಾಕಿದರು. ಅವರು ಮಹಾ ನೀಚಜನರಾಗಿದ್ದರು. ಅವರು ಬಾಗಿಲು ತಟ್ಟತೊಡಗಿದರು. ಆ ಮನೆಯ ಯಜಮಾನನಾದ ವೃದ್ಧನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ. ನಾವು ಅವನೊಂದಿಗೆ ಸಂಭೋಗ ಮಾಡಬೇಕು”ಎಂದು ಕೂಗಾಡಿದರು. ಅಧ್ಯಾಯವನ್ನು ನೋಡಿ |