Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಅವನು ಅವಳಿಗೆ, “ಏಳು, ಹೋಗೋಣ,” ಎಂದನು. ಆದರೆ ಅವಳಿಂದ ಪ್ರತ್ಯುತ್ತರ ಬರಲಿಲ್ಲ. ಆಗ ಆ ಮನುಷ್ಯನು ಅವಳ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು, ತನ್ನ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಲೇವಿಯು ಅವಳಿಗೆ, “ಏಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರಕೊಡಲಿಲ್ಲ. ಅವಳು ಸತ್ತುಹೋಗಿದ್ದಳು. ಆ ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:28
3 ತಿಳಿವುಗಳ ಹೋಲಿಕೆ  

ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.


ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.


ಅವಳ ಯಜಮಾನನು ಉದಯದಲ್ಲಿ ಎದ್ದು, ಮನೆಯ ಬಾಗಿಲನ್ನು ತೆರೆದು, ತನ್ನ ಮಾರ್ಗವಾಗಿ ಹೊರಡುವಾಗ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು