ನ್ಯಾಯಸ್ಥಾಪಕರು 19:30 - ಕನ್ನಡ ಸಮಕಾಲಿಕ ಅನುವಾದ30 ಆಗ ಅದನ್ನು ಕಂಡವರೆಲ್ಲಾ, “ಇಸ್ರಾಯೇಲರು ಈಜಿಪ್ಟಿನಿಂದ ಬಂದ ದಿವಸ ಮೊದಲ್ಗೊಂಡು ಈ ಪರ್ಯಂತರ ಇಂಥ ಕಾರ್ಯವು ಆದದ್ದೂ ಇಲ್ಲ, ಕಂಡದ್ದೂ ಇಲ್ಲ. ನೀವು ಇದರ ವಿಷಯ ಆಲೋಚಿಸಿ ಯೋಚಿಸಿರಿ. ನಾವೇನು ಮಾಡಬೇಕು ಹೇಳಿರಿ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅವುಗಳನ್ನು ಕಂಡವರೆಲ್ಲರೂ, “ಇಸ್ರಾಯೇಲರು ಐಗುಪ್ತವನ್ನು ಬಿಟ್ಟು ಬಂದ ದಿನದಿಂದ ಈ ದಿನದವರೆಗೆ ಇಂಥ ಕೃತ್ಯವು ನಡೆಯಲೇ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು” ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇದನ್ನು ನೋಡಿದ ಪ್ರತಿಯೊಬ್ಬರು, “ಈ ಮುಂಚೆ ಇಸ್ರೇಲಿನಲ್ಲಿ ಇಂಥದ್ದು ಆಗಿಲ್ಲ. ನಾವು ಈಜಿಪ್ಟಿನಿಂದ ಹೊರಬಂದಾಗಿನಿಂದ ಇಂಥದನ್ನು ನೋಡಿಲ್ಲ. ಇದಕ್ಕೆ ತಕ್ಕಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿ |