ನ್ಯಾಯಸ್ಥಾಪಕರು 19:6 - ಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು. ಅಧ್ಯಾಯವನ್ನು ನೋಡಿ |
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.