Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:10 - ಕನ್ನಡ ಸಮಕಾಲಿಕ ಅನುವಾದ

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ ಯೆಹೋವನನ್ನೂ ಆತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಪೀಳಿಗೆಯವರೆಲ್ಲರು ಸತ್ತುಹೋದ ಮೇಲೆ ಮುಂದಿನ ಪೀಳಿಗೆಯು ಬೆಳೆಯಿತು. ಈ ಹೊಸ ಪೀಳಿಗೆಗೆ ಯೆಹೋವನ ಬಗ್ಗೆ ಮತ್ತು ಯೆಹೋವನು ಇಸ್ರೇಲಿನ ಜನರಿಗಾಗಿ ಮಾಡಿದ ಮಹತ್ಕಾರ್ಯಗಳ ಬಗ್ಗೆ ಏನೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:10
26 ತಿಳಿವುಗಳ ಹೋಲಿಕೆ  

ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.


ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.


ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.


ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.


ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ಕೊನೆಗೆ, ಆ ಸ್ತ್ರೀಯು ಸಹ ಮರಣಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು