Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:17 - ಕನ್ನಡ ಸಮಕಾಲಿಕ ಅನುವಾದ

17 ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:17
25 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.


ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.


ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.


ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.


ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.


“ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.


ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.


ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು.


ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು.


ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು