ನ್ಯಾಯಸ್ಥಾಪಕರು 2:18 - ಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು. ಅಧ್ಯಾಯವನ್ನು ನೋಡಿ |