ನ್ಯಾಯಸ್ಥಾಪಕರು 2:19 - ಕನ್ನಡ ಸಮಕಾಲಿಕ ಅನುವಾದ19 ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ. ಅಧ್ಯಾಯವನ್ನು ನೋಡಿ |