21 ಆದ್ದರಿಂದ ಇನ್ನುಮುಂದೆ ನಾನು ಬೇರೆ ಜನಾಂಗಗಳನ್ನು ಸೋಲಿಸಿ ಇಸ್ರೇಲರ ಮಾರ್ಗವನ್ನು ಸರಾಗಮಾಡುವುದಿಲ್ಲ. ಯೆಹೋಶುವನು ಮರಣ ಹೊಂದಿದಾಗ ಆ ಜನಾಂಗದವರು ಇನ್ನೂ ಈ ಪ್ರದೇಶದಲ್ಲಿದ್ದರು. ಈ ಪ್ರದೇಶದಲ್ಲಿ ವಾಸಿಸಲು ಆ ಜನಾಂಗಗಳಿಗೆ ಇನ್ನು ಮೇಲೆಯೂ ಆಸ್ಪದಕೊಡುತ್ತೇನೆ.
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.
ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”
ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.