Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:22 - ಕನ್ನಡ ಸಮಕಾಲಿಕ ಅನುವಾದ

22 ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರೂ ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಯೆಹೋವನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮೂಲಕವಾಗಿ ಪರೀಕ್ಷಿಸುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರು ತಮ್ಮ ಪೂರ್ವಿಕರಂತೆ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾರೆಯೇ ಎಂಬುದನ್ನು ನಾನು ಆ ಜನಾಂಗಗಳ ಮೂಲಕ ಪರೀಕ್ಷಿಸಿ ನೋಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:22
12 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.


ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.


ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು