3 ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”
3 ‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
3 ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.
3 ನೀವು ಹೀಗೆ ಮಾಡುವದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸಿ ಬಿಡುವದಿಲ್ಲ; ಅವರು ನಿಮ್ಮನ್ನು ಉಪದ್ರವಪಡಿಸುವರು; ಅವರ ದೇವತೆಗಳು ನಿಮಗೆ ಉರುಲಾಗುವವು ಎಂದು ಮೊದಲೇ ಹೇಳಿದೆನಲ್ಲಾ ಅಂದನು.
3 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.
“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.
ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.