ನ್ಯಾಯಸ್ಥಾಪಕರು 20:10 - ಕನ್ನಡ ಸಮಕಾಲಿಕ ಅನುವಾದ10 ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲ್ಯರಲ್ಲಿ ನಡಿಸಿದ ದುಷ್ಕರ್ಮಕ್ಕಾಗಿ ಅವರಿಗೆ ದಂಡನೆ ಮಾಡೋಣ ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ಇಸ್ರೇಲಿನ ಎಲ್ಲ ಕುಲಗಳಲ್ಲಿ ಪ್ರತಿ ನೂರು ಮಂದಿಗೆ ಹತ್ತು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಸಾವಿರ ಮಂದಿಗೆ ನೂರು ಮಂದಿಯನ್ನು ಆರಿಸಿಕೊಳ್ಳೋಣ. ಪ್ರತಿ ಹತ್ತು ಸಾವಿರ ಮಂದಿಗೆ ಒಂದು ಸಾವಿರ ಮಂದಿಯನ್ನು ಆರಿಸಿಕೊಳ್ಳೋಣ. ಹೀಗೆ, ನಾವು ಆರಿಸಿಕೊಂಡ ಜನರು ಸೈನ್ಯಕ್ಕೆ ಆಹಾರ ಸರಬರಾಜು ಮಾಡಲಿ. ಆಮೇಲೆ ಬೆನ್ಯಾಮೀನ್ಯರ ಪ್ರದೇಶದಲ್ಲಿರುವ ಗಿಬೆಯಕ್ಕೆ ಸೈನ್ಯ ಕಳುಹಿಸೋಣ. ಇಸ್ರೇಲರಿಗೆ ಹೀಗೆ ನಿಂದೆಗೆ ಗುರಿಮಾಡಿದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ದೊರಕಲಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |