ನ್ಯಾಯಸ್ಥಾಪಕರು 20:13 - ಕನ್ನಡ ಸಮಕಾಲಿಕ ಅನುವಾದ13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲ್ಯರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ನೀಚರನ್ನು ಗಿಬೆಯದಿಂದ ನಮ್ಮಲ್ಲಿಗೆ ಕಳುಹಿಸಿಕೊಡಿ; ಅವರನ್ನು ನಮಗೆ ಒಪ್ಪಿಸಿರಿ. ನಾವು ಅವರನ್ನು ಕೊಲ್ಲಬೇಕು; ಇಸ್ರೇಲರ ಮಧ್ಯದಲ್ಲಿರುವ ಈ ಪಾಪಿಗಳನ್ನು ನಿರ್ಮೂಲ ಮಾಡಬೇಕು.” ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳಾದ ಇಸ್ರೇಲರ ಸಂದೇಶವನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.