Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:27 - ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:27
12 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.


ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


“ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.


ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು