Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:3 - ಕನ್ನಡ ಸಮಕಾಲಿಕ ಅನುವಾದ

3 ಬೆನ್ಯಾಮೀನ್ಯರು, ಇಸ್ರಾಯೇಲರು ಮಿಚ್ಪೆಗೆ ಬಂದ ವರ್ತಮಾನವನ್ನು ಕೇಳಿದರು. ಆಗ ಇಸ್ರಾಯೇಲರು, “ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 (ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 (ಇಸ್ರಾಯೇಲ್ಯರು ಕೂಡಿಕೊಂಡು ವಿುಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಾಯೇಲ್ಯರು - ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮಿಚ್ಛೆಯಲ್ಲಿ ಎಲ್ಲಾ ಇಸ್ರೇಲರು ಒಟ್ಟುಗೂಡುತ್ತಿದ್ದಾರೆ ಎಂಬ ಸಮಾಚಾರ ಬೆನ್ಯಾಮೀನ್ಯರಿಗೆ ತಿಳಿಯಿತು. ಇಸ್ರೇಲರು, “ಈ ಭಯಾನಕ ಕೃತ್ಯ ಹೇಗೆ ನಡೆಯಿತು. ಎಂಬುದನ್ನು ನಮಗೆ ಹೇಳು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:3
9 ತಿಳಿವುಗಳ ಹೋಲಿಕೆ  

“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.


ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು.


ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.


ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು