34 ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.
34 ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹು ಘೋರವಾಯಿತು. ತಮಗೆ ಅಪಾಯವು ಒದಗಿ ಬಂದದೆ ಎಂಬದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.
34 ಇಸ್ರೇಲಿನ ಹತ್ತು ಸಾವಿರ ಸೈನಿಕರು ಅಂದರೆ ತರಬೇತಿ ಪಡೆದ ಸೈನಿಕರು ಗಿಬೆಯ ನಗರದ ಮೇಲೆ ಧಾಳಿಮಾಡಿದರು. ಘೋರವಾದ ಯುದ್ಧ ನಡೆಯಿತು. ಆದರೆ ಇಂಥ ಭೀಕರ ಪರಿಸ್ಥಿತಿ ಉಂಟಾಗಬಹುದೆಂಬುದು ಬೆನ್ಯಾಮೀನ್ಯರಿಗೆ ತಿಳಿದಿರಲಿಲ್ಲ.
ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.
“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.
ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.
ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು.