ನ್ಯಾಯಸ್ಥಾಪಕರು 20:37 - ಕನ್ನಡ ಸಮಕಾಲಿಕ ಅನುವಾದ37 ಆಗ ಹೊಂಚು ಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಸಾಲಾಗಿ ಹೊರಟು, ಪಟ್ಟಣದಲ್ಲಿರುವವರೆಲ್ಲರನ್ನು ಖಡ್ಗದಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆಗ ಅಡಗಿಕೊಂಡಿದ್ದ ಜನರು ಗಿಬೆಯದ ನಗರಕ್ಕೆ ನುಗ್ಗಿದರು. ಅವರು ನಗರದ ಎಲ್ಲ ಕಡೆಗೂ ಹರಡಿ ಎಲ್ಲರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.