ನ್ಯಾಯಸ್ಥಾಪಕರು 20:45 - ಕನ್ನಡ ಸಮಕಾಲಿಕ ಅನುವಾದ45 ಆದರೆ ಕೆಲವರು ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬಂಡೆಗೆ ಓಡಿಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಉಳಿದವರನ್ನು ಗಿದೋಮಿನವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ತಿರುಗಿ ಎರಡು ಸಾವಿರ ಜನರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇದಲ್ಲದೆ ಅವರು ಮರುಭೂಮಿಯಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದುಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ಇನ್ನೂ ಎರಡು ಸಾವಿರ ಜನರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲುತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋವಿುನವರೆಗೆ ಹಿಂದಟ್ಟಿ ತಿರಿಗಿ ಎರಡು ಸಾವಿರ ಜನರನ್ನು ಹತಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |