ನ್ಯಾಯಸ್ಥಾಪಕರು 21:14 - ಕನ್ನಡ ಸಮಕಾಲಿಕ ಅನುವಾದ14 ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬೆನ್ಯಾಮೀನ್ಯರು ಇಸ್ರೇಲಿಗೆ ಹಿಂತಿರುಗಿ ಬಂದರು. ಇಸ್ರೇಲರು ಯಾಬೇಷ್ ಗಿಲ್ಯಾದಿನಿಂದ ಕೊಲ್ಲದೆ ತಂದಿದ್ದ ಸ್ತ್ರೀಯರನ್ನು ಅವರಿಗೆ ಕೊಟ್ಟರು. ಆದರೂ ಬೆನ್ಯಾಮೀನ್ಯರ ಎಲ್ಲಾ ಗಂಡಸರಿಗೆ ಸಾಕಾಗುವಷ್ಟು ಸ್ತ್ರೀಯರು ಇರಲಿಲ್ಲ. ಅಧ್ಯಾಯವನ್ನು ನೋಡಿ |