Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:15 - ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:15
8 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.


ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.


ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.


ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.


ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.


ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು