Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:19 - ಕನ್ನಡ ಸಮಕಾಲಿಕ ಅನುವಾದ

19 ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:19
20 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.


ದೇವರ ಮನೆ ಶೀಲೋವಿನಲ್ಲಿ ಇರುವ ಮಟ್ಟಿಗೂ, ಅವರು ಮೀಕನು ಮಾಡಿದ ವಿಗ್ರಹವನ್ನು ಇಟ್ಟುಕೊಂಡಿದ್ದರು.


ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.


ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು


ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.


ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು